(ನ್ಯೂಸ್ ಕಡಬ) newskadaba.com. ಮಂಗಳೂರು. ಮಾ20. ಚುನಾವಣೆ ದಿನಾಂಕ ಘೋಷಣೆಗೆ ದಿನ ಸಮೀಪಿಸುತ್ತಿರುವಂತೆಯೇ ಚುನಾವಣಾ ಆಯೋಗ ಚುನಾವಣಾ ಆಯೋಗವು ಮತದಾರರಿಗೆ ಆಮಿಷವೊಡ್ಡುವವರ ಮೇಲೆ ಹದ್ದಿನ ಕಣ್ಣಿಟ್ಟಿದೆ.
ಮೂಲಗಳ ಪ್ರಕಾರ ಈ ತಿಂಗಳ ಅಂತ್ಯಕ್ಕೆ ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ 16ನೇ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಲಿದ್ದು, ಮೇ 2ನೇ ವಾರದ ಅಂತ್ಯಕ್ಕೆ ಮತದಾನ ನಡೆದು ಮೂರನೇ ವಾರದಲ್ಲಿ ಇಡೀ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಇನ್ನೊಂದೆಡೆ ಚುನಾವಣೆಯ ಹಿನ್ನಲೆ ಅಕ್ರಮ ತಡೆಯುವುದಕ್ಕಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೊಲೀಸರು ತಪಾಸಣೆ ಬಿಗಿಗೊಳಿಸಿದ್ದಾರೆ. ಆಯಕಟ್ಟಿನ ಜಾಗದಲ್ಲಿ ವಿಶೇಷ ಕಣ್ಗಾವಲಿಟ್ಟಿದ್ದಾರೆ.
ಇದಲ್ಲದೆ ನಗರದ 11 ಚೆಕ್ ಪೋಸ್ಟ್ ಗಳಲ್ಲಿ ನಿರಂತರವಾಗಿ ತಪಾಸಣೆ ನಡೆಯುತ್ತಿದೆ. ಜೆತೆಗೆ ಆರೇಳು ಕಡೆಗಳಲ್ಲಿ ದಿಡೀರ್ ತಪಾಸಣೆ ನಡೆಸಲಾಗುತ್ತಿದೆ. ಏಳು ಅಂತರಾಜ್ಯ ಚೆಕ್ ಪೋಸ್ಟ್ ಗಳಲ್ಲಿಯೂ ನಿರಂತರ ಬಿಗಿ ತಪಾಸಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.