(ನ್ಯೂಸ್ ಕಡಬ) newskadaba.com.ಬೆಂಗಳೂರು. ಮಾ20. ಬೆಸ್ಕಾಂನವರು ಎಂದು ಹೇಳಿಕೊಂಡು ಆನ್‌ಲೈನ್ ವಂಚಕರು ನಗರದ ರೆಸ್ಟೋರೆಂಟ್ ಮಾಲೀಕ ಮತ್ತು ಅವರ ಪತ್ನಿಗೆ ರೂ. 3.7 ಲಕ್ಷ ರೂಪಾಯಿ ವಂಚಿಸಿರುವ ಘಟನೆ ನಡೆದಿದೆ. ವಂಚಕರು ಯೆಸ್ ಬ್ಯಾಂಕ್‌ನಲ್ಲಿರುವ ತಮ್ಮ ಜಂಟಿ ಖಾತೆಯಿಂದ ಹಣ ತೆಗೆದಿದ್ದಾರೆ. ಆಕ್ಸಿಸ್ ಬ್ಯಾಂಕ್ ಅಕೌಂಟ್ ಹ್ಯಾಕ್ ಮಾಡಲೂ ಪ್ರಯತ್ನಿಸಿ ವಿಫಲರಾಗಿದ್ದಾರೆ ಎಂದು ಬ್ಲೇಸ್ ಡಿಸೋಜಾ ಅವರ ಪತ್ನಿ ಡಯಾನಾ ಡಿಸೋಜಾ ಹೇಳಿದ್ದಾರೆ.
ವಂಚಕರು ಫೆಬ್ರವರಿ 28 ರಂದು ಬೆಸ್ಕಾಂ ಬಿಲ್ ಪಾವತಿ ಅಪ್ ಡೇಟ್ ಆಗಿಲ್ಲ ಎಂಬ ಮೇಸೆಜ್ ಕಳುಹಿಸಿದ್ದಾರೆ. ಆತ್ಮೀಯ ಗ್ರಾಹಕರೇ, ಹಿಂದಿನ ತಿಂಗಳ ಬಿಲ್ ನವೀಕರಿಸದ ಕಾರಣ ಇಂದು ರಾತ್ರಿ 9.30 ಕ್ಕೆ ನಿಮ್ಮ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತದೆ” ಎಂದು ಸಂದೇಶ ಕಳುಹಿಸಲಾಗಿದೆ. ಆಗ ಡಯಾನಾಗೆ ಶರ್ಮಾ ಎಂದು ಪರಿಚಯಿಸಿಕೊಂಡ ವ್ಯಕ್ತಿಯಿಂದ ಕರೆ ಬಂದಿದ್ದು, ಬೆಸ್ಕಾಂ ಅಧಿಕಾರಿ ಎಂದು ಹೇಳಿಕೊಂಡು ಮೊದಲಿಗೆ ನಂಬರ್ ಕೇಳಿದ್ದಾರೆ. ಆತ ಬಿಲ್ ನ ಸರಿಯಾದ ಆರ್ ಆರ್ ಸಂಖ್ಯೆ ಮತ್ತು ಬ್ಯಾಂಕ್ ವಿವರ ನೀಡಿದ್ದಾರೆ. ನಂತರ ಆತ ಯೆಸ್ ಬ್ಯಾಂಕ್ ನಲ್ಲಿರುವ ಜಂಟಿ ಖಾತೆಯನ್ನು ಹ್ಯಾಕ್ ಮಾಡಿ ಹಣ ವಿತ್ ಡ್ರಾ ಮಾಡಿರುವುದಾಗಿ ತಿಳಿದು ಬಂದಿದೆ.