ಮಂಗಳೂರು: ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನದಿಯಲ್ಲಿ ಪತ್ತೆ ► ಆತ್ಮಹತ್ಯೆಯೋ, ಕೊಲೆಯೋ ಎಂಬ ಬಗ್ಗೆ‌ ವ್ಯಾಪಕ ಸಂಶಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06. ಕಾಲೇಜು ವಿದ್ಯಾರ್ಥಿನಿಯೋರ್ವಳ ಮೃತದೇಹವೊಂದು ಗುರುಪುರದ ಫಲ್ಗುಣಿ ನದಿಯಲ್ಲಿ ಶನಿವಾರದಂದು ಪತ್ತೆಯಾಗಿದೆ.

ಮೃತ ಯುವತಿಯನ್ನು ಉಲಾಯಿಬೆಟ್ಟು ನಿವಾಸಿ ನಗರದ ಕಾಲೇಜೊಂದರ ವಿದ್ಯಾರ್ಥಿನಿ ತನುಶ್ರಿ (17) ಎಂದು ಗುರುತಿಸಲಾಗಿದ್ದು, ಈಕೆಯ ಮೃತದೇಹವು ಶನಿವಾರದಂದು ಗುರುಪುರದ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಮಾಹಿತಿ ತಿಳಿದ ಕಂಕನಾಡಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಇದು ಆತ್ಮಹತ್ಯೆಯೋ ಅಥವಾ ಯಾರಾದರೂ ಕೊಲೆಗೈದು ನದಿಗೆ ಎಸೆದಿರಬಹುದೇ ಎನ್ನುವ ಬಗ್ಗೆ ಕುತೂಹಲ ಮೂಡಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Also Read  ಎಂಡೋಸಲ್ಫಾನ್ ಸಂತ್ರಸ್ತರಿಗೆ ಜ.17ರಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ

error: Content is protected !!