ಬೆಂಗಳೂರು ಶೋಭಾ ಡೆವಲಪರ್ಸ್‌ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ದಾಳಿ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮಾ20.  ಬೆಂಗಳೂರು ವೈಟ್‌ ಫೀಲ್ಡ್‌ ರಸ್ತೆಯ ಹೂಡಿಯಲ್ಲಿರುವ ಶೋಭಾ ಡೆವಲಪರ್ಸ್‌ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ.

ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು ಮತ್ತು ಚೆನ್ನೈ ವಿಭಾಗದ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ. ಸುಮಾರು 50 ವಾಹನಗಳಲ್ಲಿ ಬಂದು ದಾಳಿ ನಡೆಸಿದ್ದಾರೆ. 10 ಅಧಿಕಾರಿಗಳನ್ನೊಳಗೊಂಡ ಐದು ತಂಡಗಳಿಂದ ಏಕಕಾಲಕ್ಕೆ ದಾಳಿ ನಡೆದಿದೆ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ವಿವಿಧೆಡೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ಶೋಭಾ ಡೆವಲಪರ್ಸ್‌ಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Scroll to Top