ಮಂಗಳೂರು: ರೈಲು ಬೋಗಿಯ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣದಲ್ಲಿ ನಿಂತಿದ್ದ ರೈಲುಗಾಡಿಯ ಡಿ3 ಬೋಗಿಯ ಶೌಚಾಲಯದಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಕುರಿತು ವರದಿಯಾಗಿದೆ.

ಮೃತ ವ್ಯಕ್ತಿ 40-45 ವರ್ಷ ಪ್ರಾಯದವರಾಗಿದ್ದು, 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದಾರೆ. ಸಿಮೆಂಟ್‌ ಬಣ್ಣದ ಜರ್ಸಿ, ಕೇಸರಿ ಬಣ್ಣದ ಟಿ-ಶರ್ಟ್‌ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ ಅದರೊಳಗೆ ಕಪ್ಪು ಬಣ್ಣದ ಮಾಸಲು ಪ್ಯಾಂಟ್‌ ಧರಿಸಿದ್ದು, ಕುತ್ತಿಗೆಯಲ್ಲಿ ಮಣಿ ಸರವಿದೆ. ಈ ಕುರಿತು ಮಂಗಳೂರು ರೈಲ್ವೇ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾರಸುದಾರರು ಇದ್ದಲ್ಲಿ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Also Read  ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ಮುಂದಾಳು ಬಿ.ಕೆ ಕೃಷ್ಣಪ್ಪ ನಿಧನ

error: Content is protected !!
Scroll to Top