ಇಂದು ಪುಂಜಾಲಕಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರುಮಾ. 21. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿಂಗ್ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಪುಂಜಾಲಕಟ್ಟೆಯ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಮಾ. 21ರ ಮಂಗಳವಾರ ಬೆಳಗ್ಗೆ 9 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಶಂಕುಸ್ಥಾಪನೆ ನೆರವೇರಿಸುವರು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ರಾಜೇಶ್ ನಾಯ್ಕ ಯು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ವಿಧಾನ ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ್ ಸಿಂಹ ನಾಯಕ, ಮಂಜುನಾಥ ಭಂಡಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಪಿಲಾತಬೆಟ್ಟು ಗ್ರಾಮ ಪಂಚಾಯತ್‍ನ ಅಧ್ಯಕ್ಷರಾದ  ಹರ್ಷಿಣಿ ಪುಷ್ಪಾನಂದ, ಬಡಗಕಜೆಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆಯಾದ ಅಸ್ಮ, ಕಾವಳಪಡೂರು ಗ್ರಾಮ ಪಂಚಾಯತ್ ನ ಅಧ್ಯಕ್ಷೆಯಾದ ರಜನಿ, ಇರ್ವತ್ತೂರು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಎಂ.ಪಿ. ಶೇಖರ್, ಕಾವಳಮುಡೂರು ಗ್ರಾಮ ಪಂಚಾಯತ್ ನ ಅಧ್ಯಕ್ಷೆಯಾದ ಜಯಲಕ್ಷ್ಮಿ ಭಾಗವಹಿಸುವರು.

Also Read  ಸವಣೂರು: ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ ► ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ

error: Content is protected !!
Scroll to Top