ಇಟಾಲಿಯನ್ ಮತ್ತು ಸ್ಪ್ಯಾನಿಶ್ ಭಾಷೆ ಗೆ ಕಾಂತಾರ ಡಬ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ಮಾತ್ರ ರಿಲೀಸ್ ಮಾಡಲಾಗಿತ್ತು. ಕನ್ನಡ ಪ್ರೇಕ್ಷಕರು ಚಿತ್ರವನ್ನು ಅಪ್ಪಿಕೊಂಡು, ಹಾಡಿ ಹೊಗಳಿದ ಬಳಿಕ ಬೇರೆ ಬೇರೆ ಭಾಷೆಯ ಪ್ರೇಕ್ಷರಿಂದ ಬೇಡಿಕೆ ಹೆಚ್ಚಾಗಿತ್ತು. ಬಳಿಕ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್​ ಮಾಡಿ ರಿಲೀಸ್​ ಮಾಡಲಾಯಿತು. ಎಲ್ಲಾ ಭಾಷೆಗಳಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದಲ್ಲದೇ ಭರ್ಜರಿ ಕಲೆಕ್ಷನ್ ಕೂಡ​ ಆಯಿತು ಎನ್ನಲಾಗಿದೆ. ಒಟಿಟಿ ಪ್ರೇಕ್ಷಕರಿಗಾಗಿ ಇಂಗ್ಲಿಷ್​ ವರ್ಷನ್​ ಕೂಡ ರಿಲೀಸ್​ ಆಯಿತು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇಟಾಲಿಯನ್​ ಮತ್ತು ಸ್ಪ್ಯಾನಿಶ್​​ ಭಾಷೆಗಳಿಗೆ ಡಬ್​ ಆಗುತ್ತಿದೆ. ಈ ಕುರಿತು ಹೊಂಬಾಳೆ ಫಿಲ್ಮ್ಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬಹಿರಂಗಪಡಿಸಿದೆ ಎಂದು ವರದಿ ತಿಳಿಸಿದೆ.

Also Read  ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೂ ಕೊವಿಡ್​-19 ದೃಢ

 

error: Content is protected !!
Scroll to Top