ನೀವು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಲ್ಲವೇ…? ► ಜ.12 ರವರೆಗೆ ಅವಕಾಶ ವಿಸ್ತರಣೆ

(ನ್ಯೂಸ್ ಕಡಬ) newskadaba.com
ಮಂಗಳೂರು, ಜ.07. ಭಾರತದ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಬಗ್ಗೆ ಜನವರಿ 1 ರಂದು ಅರ್ಹತಾ ದಿನಾಂಕವಾಗಿ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಜನವರಿ 12 ರ ವರೆಗೆ ವಿಸ್ತರಣೆ ಮಾಡಿ ಅಧಿಸೂಚನೆ ಹೊರಡಿಸಿದೆ.

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ತಮ್ಮ ಹಕ್ಕು ಆಕ್ಷೇಪಣೆಗಳನ್ನು ಜನವರಿ 12 ರೊಳಗೆ ಮತಗಟ್ಟೆಯ ಕ್ಷೇತ್ರ ಮಟ್ಟದ ಅಧಿಕಾರಿಯವರಲ್ಲಿ ಅಥವಾ ಮಂಗಳೂರು ಮಹಾನಗರ ಪಾಲಿಕೆ ಲಾಲ್‍ಬಾಗ್ ಕಚೇರಿಯ ಚುನಾವಣಾ ಶಾಖೆಯಲ್ಲಿ ಸಲ್ಲಿಸಬಹುದು ಎಂದು ಸಹಾಯಕ ಮತದಾರರ ನೋಂದಣಾಧಿಕಾರಿ, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Also Read  ➤ ಉಡುಪಿ ಅಲೆಯ ಹೊಡೆತಕ್ಕೆ ದೋಣಿ ಮುಳುಗಿ ಮೀನುಗಾರ ಮೃತ್ಯು..!

error: Content is protected !!
Scroll to Top