ಆಸ್ತಿ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 21. ಆಸ್ತಿ ವಿಚಾರಕ್ಕೆ ಸಂಬಂಧಿಸಿ ಚಾಕುವಿನಿಂದ ಇರಿದು ಯುವಕನೋರ್ವನ ಕೊಲೆ‌ ಮಾಡಿರುವ ಬಗ್ಗೆ ಹೊಸಕೋಟೆ ತಾಲೂಕಿನ ಮೇಡಿಮಲ್ಲಸಂದ್ರ ಗ್ರಾಮದಿಂದ ವರದಿಯಾಗಿದೆ.

ಹತ್ಯೆಯಾದವರನ್ನು ಇಸ್ಮಾಯಿಲ್ ಖಾನ್(26) ಎಂದು ಗುರುತಿಸಲಾಗಿದೆ. ಕಳೆದ ಹಲವು ದಿನಗಳಿಂದ ಇವರ ಮಧ್ಯೆ ಆಸ್ತಿ ವಿಚಾರಕ್ಕೆ ಕಲಹ ನಡೆಯುತ್ತಿದ್ದು ಈ ನಡುವೆ ಮನೆ ಮುಂದೆ ಕಳೆದ ರಾತ್ರಿ ಕಾರು ನಿಲ್ಲಿಸುವ ವಿಚಾರಕ್ಕೆ ಜಗಳ ನಡೆದಿದೆ. ಬಳಿಕ ಮಾತಿನ‌ ಚಕಮಕಿ ವಿಕೋಪಕ್ಕೆ ತಿರುಗಿ ಡ್ರಾಗರ್ ನಿಂದ ಇರಿದು ಕೊಲೆ ಮಾಡಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ.

Also Read  ಅನ್ನಭಾಗ್ಯ- ಬಿಪಿಎಲ್ ದಾರರಿಗೆ ಹಣದ ಬದಲು ರಾಗಿ ಮತ್ತು ಗೋಧಿ ಕಿಟ್..!

error: Content is protected !!
Scroll to Top