ಚರಂಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ದಾವಣಗೆರೆ, ಮಾ. 21. ಚರಂಡಿ ಸ್ವಚ್ಛಗೊಳಿಸುವಾಗ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರು ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ವರದಿಯಾಗಿದೆ.

ಮೃತ ಪೌರ ಕಾರ್ಮಿಕರನ್ನು ಸತ್ಯಪ್ಪ(45) ಹಾಗೂ ಮೈಲಪ್ಪ(42) ಎಂದು ಗುರುತಿಸಲಾಗಿದೆ. ಇವರು ಪಿಡಿಒ ಆದೇಶದ ಮೇರೆಗೆ ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲದೇ ಚರಂಡಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದು, ಈ ವೇಳೆ ವಿಷ ಗಾಳಿ ಸೇವಿಸಿ ಕಾರ್ಮಿಕರಿಬ್ಬರು ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

error: Content is protected !!
Scroll to Top