ಕಾಸರಗೋಡು: ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು

(ನ್ಯೂಸ್ ಕಡಬ) newskadaba.com ಕಾಸರಗೋಡು, ಮಾ. 21. ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಿಂದ ವರದಿಯಾಗಿದೆ.

ಮೃತ ವಿದ್ಯಾರ್ಥಿನಿಯನ್ನು ಬಂದಡ್ಕ ಮಾಲಕುಂಡ ಇಲ್ಲತಿಂಗಲ್ ನಿವಾಸಿ ಸುಜಾತಾ ಎಂಬವರ ಪುತ್ರಿ ಕೆ.ವಿ.ಶರಣ್ಯಾ(17) ಎಂದು ಗುರುತಿಸಲಾಗಿದೆ. ಸುಜಾತಾರವರು ಸೋಮವಾರದಂದು ಸಂಜೆ ಕೆಲಸ ಮುಗಿಸಿ ಮನೆಗೆ ಬಂದಾಗ ಮನೆಯ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಶರಣ್ಯಾಳ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಬೇಡಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Scroll to Top