(ನ್ಯೂಸ್ ಕಡಬ) newskadaba.com ಪಂಜಾಬ್, ಮಾ. 21. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಪ್ರವಾಸದ ಸಂದರ್ಭದಲ್ಲಿ ಏರ್ಪಟ್ಟ ಅತಿದೊಡ್ಡ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಪಂಜಾಬ್‌ನ ಮಾಜಿ ಡಿಜಿಪಿ ಸಹಿತ ಹಲವು ಪೊಲೀಸರ ವಿರುದ್ದ ಕ್ರಮ ಕೈಗೊಳ್ಳಲು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಸೂಚನೆ ನೀಡಿದ್ದಾರೆ.
2022ರ ಜನವರಿಯಲ್ಲಿ ಪಂಜಾಬ್‌ಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದ ವೇಳೆ ಉಂಟಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಹಿಂದಿನ ಡಿಜಿಪಿ ಸಿದ್ದಾರ್ಥ್ ಚಟ್ಟೋಪಾಧ್ಯಾಯ, ಹಿಂದಿನ ಡಿಐಜಿ ಇಂದರ್ಬಿರ್ ಸಿಂಗ್, ಹಿರಿಯ ಸೂಪರಿಡೆಂಟ್ ಆಫ್ ಪೊಲೀಸ್ ಹರ್ಮನ್‌ದೀಪ್ ಸಿಂಗ್ ಸೇರಿದಂತೆ ಹಲವು ಪೊಲೀಸರ ವಿರುದ್ದ ಕ್ರಮಕ್ಕೆ ಮುಂದಾಗಿದ್ದಾರೆ. ಕರ್ತವ್ಯಲೋಪ ಎಸಗಿದ 9 ಮಂದಿ ಪಂಜಾಬ್ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮಾರ್ಚ್ 14ರಂದು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಕೆ ಜಂಜುವಾ ಶಿಫಾರಸು ಮಾಡಿದ್ದರು. ಇದೀಗ ಸಿಎಂ ಭಗವಂತ ಮಾನ್ ಅವರು ಈ ವಿಚಾರವಾಗಿ ಮಾತನಾಡಿದ್ದಾರೆ.