ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ವಂಚನೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿ ಒಳ್ಳೆಯ ಲಾಭಾಂಶವನ್ನು ಪಡೆಯಬಹುದು ಎಂದು ನಂಬಿಸಿ, ಹಲವರಿಂದ ಕೋಟ್ಯಂತರ ರೂ. ಹಣವನ್ನು ಹೂಡಿಕೆ ಮಾಡಿಸಿ, ವಂಚನೆ ಮಾಡಿದ ಪ್ರಕರಣದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

 

ಬಂಧಿತ ಆರೋಪಿಯನ್ನು ಕೇರಳದ ಮಲಪ್ಪುರ ಜಿಲ್ಲೆಯ ಚಕ್ಕರತೋಡಿ ನಿವಾಸಿ ಹಂಝಾ ಸಿ.ಟಿ. ಎಂದು ಗುರುತಿಸಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈತ ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಂತರ ರೂ. ಹಣ ಲಾಭ ಗಳಿಸಬಹುದು ಎಂದು ಹಲವಾರು ಮಂದಿಯಿಂದ ಹಣವನ್ನು ಹೂಡಿಕೆ ಮಾಡಿ, ತಿಂಗಳಿಗೆ 25 % ಲಾಭಾಂಶವನ್ನು ನೀಡದೇ ವಂಚನೆ ಮಾಡಿರುವುದಾಗಿ ಆರೋಪಿಸಲಾಗಿದೆ. ಪತ್ತೆ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗ್ಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್‌ಐ ರಾಜೇಂದ್ರ, ಹಾಗೂ ಸಿಸಿಬಿ ಸಿಬಂದಿಗಳು ಪಾಲ್ಗೊಂಡಿದ್ದರು.

error: Content is protected !!

Join the Group

Join WhatsApp Group