ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 17 ಜನರು ಮೃತ್ಯು, ಹಲವರಿಗೆ ಗಾಯ 

(ನ್ಯೂಸ್ ಕಡಬ) newskadaba.com ಬಾಂಗ್ಲದೇಶ, ಮಾ. 21. ಬಸ್ ಕಂದಕಕ್ಕೆ ಬಿದ್ದ ಪರಿಣಾಮ 17 ಜನರು ಮೃತಪಟ್ಟು, 30 ಜನರು ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದ ಮದರಿಪುರದಲ್ಲಿ ನಡೆದಿದೆ.

ಢಾಕಾಗೆ ತೆರಳುತ್ತಿದ್ದ ಬಸ್ ಮದರಿಪುರದ ಎಕ್ಸ್ ಪ್ರೆಸ್ ವೇನಲ್ಲಿ ಕಮರಿಗೆ ಬಿದ್ದಿದ್ದು, ಪರಿಣಾಮ 17 ಜನರು ಮೃತಪಟ್ಟಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡವರನ್ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಮದರಿಪುರ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಮಸೂದ್ ಆಲಂ ತಿಳಿಸಿದ್ದಾರೆ.

Also Read  ದ.ಕ ಜಿಲ್ಲಾ ನ್ಯಾಯಾಂಗ ಘಟಕ ➤ಸಂದರ್ಶನ ದಿನ ಮುಂದೂಡಿಕೆ

error: Content is protected !!
Scroll to Top