ನಟ ಚೇತನ್ ಅಹಿಂಸಾ ಗೆ 14 ದಿನಗಳ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 21. ಸಾಮಾಜಿಕ ಜಾಲತಾಣದಲ್ಲಿ ಸಂಘಪರಿವಾರದ ವಿರುದ್ದ ಪೋಸ್ಟ್ ಹಾಕಿದ್ದಾರೆಂಬ ಆರೋಪದ ಮೇಲೆ ಬಂಧನಕ್ಕೊಳಗಾದ ನಟ ಚೇತನ್ ಅಹಿಂಸಾ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯವು ಆದೇಶಿಸಿದೆ.

ಚೇತನ್ ಅವರು ಸಂಘಪರಿವಾರದ ವಿರುದ್ದ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆಂದು ಆರೋಪಿಸಿ ಶಿವಕುಮಾರ್ ಎಂಬವರು ನೀಡಿದ ದೂರಿನಂತೆ ಶೇಷಾದ್ರಿಪುರಂ ಪೊಲೀಸರು ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಎಫ್ಐಆರ್ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

Also Read  ಮಂಗಳೂರು: ಕಾರ್ಗಿಲ್ ವಿಜಯೋತ್ಸವ

error: Content is protected !!
Scroll to Top