ನೃತ್ಯ ಮಾಡುತ್ತಲೇ ಹೃದಯಾಘಾತದಿಂದ ಪ್ರಾಣ ಬಿಟ್ಟ ಸರ್ಕಾರಿ ನೌಕರ



(ನ್ಯೂಸ್ ಕಡಬ) newskadaba.com ಭೋಪಾಲ್, ಮಾ. 21. ನೃತ್ಯ ಮಾಡುತ್ತಾ ಸರ್ಕಾರಿ ನೌಕರರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಭೋಪಾಲ್ ನಲ್ಲಿ ನಡೆದಿದೆ.







ಮೃತರನ್ನು ಮಧ್ಯಪ್ರದೇಶ ಅಂಚೆ ವೃತ್ತದ ಸಹಾಯಕ ನಿರ್ದೇಶಕ ಟೆಕ್ನಿಕಲ್ ಸುರೇಂದ್ರ ಕುಮಾರ್ ದೀಕ್ಷಿತ್ (55) ಎಂದು ಗುರುತಿಸಲಾಗಿದೆ. ಅಖಿಲ ಭಾರತ ಅಂಚೆ ಹಾಕಿ ಪಂದ್ಯಾವಳಿಯನ್ನು ಅಂಚೆ ಇಲಾಖೆಯು ಮಾರ್ಚ್ 20 ರಂದು ಮಧ್ಯಪ್ರದೇಶದ ರಾಜದಾನಿ ಭೋಪಾಲ್ ನಲ್ಲಿ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಸುರೇಂದ್ರ ಕುಮಾರ್ ದೀಕ್ಷಿತ್ ಅವರು ತಮ್ಮ ಸ್ನೇಹಿತರೊಂದಿಗೆ ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ, ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.






error: Content is protected !!
Scroll to Top