ರಾಜ್ಯದ 5 ನಗರಗಳಿಗೆ ಇ-ಬಸ್ ಸೇವೆ ವಿಸ್ತರಿಸಿದ KSRTC

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 21. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೊಸದಾಗಿ ಬೆಂಗಳೂರಿನಿಂದ ರಾಜ್ಯದ ಐದು ನಗರಗಳಿಗೆ ಇವಿ ಪವರ್‌ ಪ್ಲಸ್‌ ಎಂಬ ಎಲೆಕ್ಟ್ರಿಕ್‌ ಬಸ್‌ ಸೇವೆಯನ್ನ ಆರಂಭಿಸಿದೆ. ಈ ಮೂಲಕ ಬೆಂಗಳೂರು-ಮೈಸೂರು ಮಾತ್ರವಲ್ಲದೇ ರಾಜ್ಯದ ಇತರೆ ನಗರಗಳ ಪ್ರಯಾಣಿಕರು ಕೂಡಾ ಎಲೆಕ್ಟ್ರಿಕ್‌ ಬಸ್‌ ಸೇವೆಯನ್ನು ಪಡೆಯಬಹುದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್​ಆರ್​ಟಿಸಿ) ಅಂತರ್ ನಗರ ನೂತನ ಹವಾ ನಿಯಂತ್ರಿತ ಎಲೆಕ್ಟ್ರಿಕ್ ಚಾಲಿತ ಇ.ವಿ. ಪವರ್ ಪ್ಲಸ್ ಬಸ್ ಗಳಿಗೆ ಚಾಲನೆ ನೀಡಿದರು.

Also Read  ಕರ್ನಾಟಕ ರಾಜ್ಯಾದ್ಯಂತ ಮುಂದಿನ ಎರಡು ದಿನ ಭಾರೀ ಮಳೆ ➤ ಹವಾಮಾನ ಇಲಾಖೆಯಿಂದ ಮುನ್ಸೂಚನೆ

error: Content is protected !!
Scroll to Top