ಮಂಗಳೂರು: ಸರಣಿ ಅಪಘಾತ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ಸರಣಿ ಅಪಘಾತ ಸಂಭವಿಸಿದ ಘಟನೆ ನಗರದ ಕೋರ್ಟ್ ರಸ್ತೆಯಲ್ಲಿ ನಡೆದಿದೆ.

ಕಾರೊಂದು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಮತ್ತು ಕಾರೊಂದಕ್ಕೆ ಢಿಕ್ಕಿ ಹೊಡೆದು ರಸ್ತೆ ಪಕ್ಕ ಪಲ್ಟಿಯಾಗಿದ್ದು, ಪರಿಣಾಮ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಕಾರನ್ನು ಇಳಿಜಾರಿನಲ್ಲಿ ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ಚಪ್ಪಲಿ ಎಕ್ಸಲೇಟರ್ ಪೆಡಲ್ ಮಧ್ಯೆ ಸಿಕ್ಕಿಹಾಕಿಕೊಂಡು ಕಾರಿನ ವೇಗ ಹೆಚ್ಚಾಗಿ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Scroll to Top