ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್‌ಐ..!

(ನ್ಯೂಸ್ ಕಡಬ) newskadaba.com ರಾಣೆಬೆನ್ನೂರು, ಮಾ. 21. ಲಂಚ ಪಡೆಯುವಾಗ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ರಾಣೆಬೆನ್ನೂರಿನಲ್ಲಿ ನಡೆದಿದೆ.

ಫಿರೋಜ್ ಎಂಬವರಿಗೆ ಬಾಡಿಗೆ ವಸೂಲಿ ಮಾಡಿಕೊಡಲು 40,000 ರೂಪಾಯಿ ಲಂಚ ಪಡೆಯುವಾಗ ರಾಣೆಬೆನ್ನೂರು ನಗರ ಪೊಲೀಸ್‌ ಠಾಣೆ ಸಬ್ ಇನ್ಸ್ಪೆಕ್ಟರ್ ಸುನಿಲ್ ತೇಲಿ ಅವರನ್ನು ದಾವಣಗೆರೆ ಲೋಕಾಯುಕ್ತ ಪೊಲೀಸರು ಹಿಡಿದಿದ್ದಾರೆ.

ಈ ಸಂದರ್ಭದಲ್ಲಿ ಸುನಿಲ್ ತೇಲಿಯವರ ವಾಹನ ಚಾಲಕ ಸಚಿನ್ ಅವರನ್ನೂ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

Also Read  ಮಹಾನಗರಪಾಲಿಕೆಯಿಂದ ಉದ್ದಿಮೆ ಪರವಾನಿಗೆ ಪಡೆಯಲು ಸೂಚನೆ

 

error: Content is protected !!
Scroll to Top