ಮಾ. 31ರಿಂದ ಏ. 15ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ➤ KSRTCಯಿಂದ ಉಚಿತ ಪ್ರಯಾಣಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 21. ಈಗಾಗಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಕೆಎಸ್ಸಾರ್ಟಿಸಿಯು ತನ್ನ ಸಾರಿಗೆ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿತ್ತು. ಇದೀಗ ಮುಂದುವರೆದು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೂ ಪರೀಕ್ಷಾ ದಿನಗಳಂದು ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದೆ.


ಈ ಬಗ್ಗೆ ಕೆ ಎಸ್ ಆರ್ ಟಿ ಸಿ ಸುತ್ತೋಲೆ ಹೊರಡಿಸಿದ್ದು, 2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು ಮಾ. 31ರಿಂದ ಆರಂಭಗೊಂಡು ಏ. 15ರ ವರೆಗೆ ನಡೆಸಲು ತೀರ್ಮಾನಿಸಿದೆ. ಅಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳಲು ಉಚಿತ ಅವಕಾಶ ನೀಡುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೋರಿದ್ದಾರೆ ಎಂದಿದೆ.

Also Read  ಬೆಳ್ಳಾರೆ: ಕಾಳುಮೆಣಸು ಕಳ್ಳತನ ➤ ನಾಲ್ವರು ಆರೋಪಿಗಳು ಅರೆಸ್ಟ್

error: Content is protected !!