ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಬಾಲಕಿಗೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲು – News Kadaba

ಮಂಗಳೂರು: ಬಾಲಕಿಗೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 22. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಆರೋಪಿ ಕಾವೂರು ಮರಕಡ ಸಮೀಪದ ನಿವಾಸಿ, ಬಸ್‌ ಚಾಲಕ ದಯಾನಂದ ದಾನಣ್ಣನವರ್‌ (30) ಎಂದು ಗುರುತಿಸಲಾಗಿದೆ. ಈತ 13 ವರ್ಷದ ವಿದ್ಯಾರ್ಥಿನಿಯೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, 2022ರ ಜ. 27ರಂದು ಹೊರಗಡೆ ತಿರುಗಾಡುವುದಕ್ಕೆ ಬರುವಂತೆ ಸಂದೇಶ ಕಳುಹಿಸಿದ್ದ. ಇದಕ್ಕೆ ನಿರಾಕರಿಸಿದ ಬಾಲಕಿಯನ್ನು ಆತ ಒತ್ತಾಯದಿಂದ ಪುಸಲಾಯಿಸಿ ಜ. 28ರಂದು ಆಟೋರಿಕ್ಷಾದಲ್ಲಿ ಮಂಗಳೂರಿನ ಹಂಪನಕಟ್ಟೆಯ ಲಾಡ್ಜ್‌ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ. ಬಳಿಕ ಮನೆ ಬಳಿ ಕರೆತಂದು, ಮನೆಯಲ್ಲಿ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದ. ಆದರೂ ಬಾಲಕಿ ಮನೆಯಲ್ಲಿ ನಡೆದ ವಿಷಯವನ್ನೆಲ್ಲಾ ತಿಳಿಸಿದ್ದು, ಈ ಕುರಿತು ಮನೆಯವರು ಮಂಗಳೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದರು. ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಸ್ಟಿಎಸ್‌ಸಿ-2 ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಪೋಕ್ಸೋ ಕಲಂ 4ರಡಿ 20 ವರ್ಷ ಜೈಲು, 50,000 ರೂ. ದಂಡ ವಿಧಿಸಿ, ದಂಡ ಪಾವತಿಸಲು ತಪ್ಪಿದರೆ ಮತ್ತೆ 4 ತಿಂಗಳು ಜೈಲು ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ. ನೊಂದ ಬಾಲಕಿಗೆ 3 ಲ.ರೂ. ಪರಿಹಾರ ನೀಡಬೇಕು. ಅದರಲ್ಲಿ 1 ಲಕ್ಷ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಿ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು. ಉಳಿದ 2 ಲ.ರೂ.ಗಳನ್ನು ಆಕೆಯ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಠೇವಣಿ ಇಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Scroll to Top