ವಿನಾಯಕ ಬಾಳಿಗಾ ಕೊಲೆ ಪ್ರಕರಣ ➤ ದೇಶಪ್ರೇಮಿ ಸಂಘಟನೆಗಳಿಂದ ಕಾಲ್ನಡಿಗೆ ಜಾಥಾ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 22. ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾರವರ ಕೊಲೆ ಪ್ರಕರಣವನ್ನು ಖಂಡಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ದೇಶಪ್ರೇಮಿ ಸಂಘಟನೆಗಳ ಒಕ್ಕೂಟದಿಂದ ನಗರದ ರಥಬೀದಿಯ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಅವರ ಮನೆಯವರೆಗೆ ಕಾಲ್ನಡಿಗೆ ಜಾಥಾ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಮನೋವೈದ್ಯ ಡಾ| ಪಿ.ವಿ.ಭಂಡಾರಿ, ವಿನಾಯಕ ಬಾಳಿಗಾ ಅವರ ಕೊಲೆ ನಡೆದು ಏಳು ವರ್ಷಗಳು ಕಳೆದರೂ ಸರಕಾರವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಇದರ ವಿರುದ್ಧ ಹೋರಾಟ ತೀವ್ರಗೊಳಿಸಬೇಕಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನಾಗರಿಕ ಸೇವಾ ಟ್ರಸ್ಟ್‌ನ ಸೋಮನಾಥ ನಾಯಕ್‌, ವಿನಾಯಕ ಬಾಳಿಗಾ ಅವರ ಸಹೋದರಿಯರಾದ ಹರ್ಷಾ ಬಾಳಿಗಾ, ಅನುರಾಧಾ ಬಾಳಿಗಾ, ಮಾಜಿ ಉಪಮೇಯರ್‌ ಮುಹಮ್ಮದ್‌ ಕುಂಜತ್ತಬೈಲ್‌, ಪ್ರಮುಖರಾದ ಎಂ.ದೇವದಾಸ್‌, ವಾಸುದೇವ ಉಚ್ಚಿಲ್‌, ಸುನಿಲ್‌ ಬಜಿಲಕೇರಿ, ಸುನೀಲ್‌ ಕುಮಾರ್‌ ಬಜಾಲ್‌, ಬಿ.ಕೆ. ಇಮ್ತಿಯಾಝ್, ಮಂಜುಳಾ ನಾಯಕ್‌, ಪ್ರಕಾಶ್‌ ಸಾಲ್ಯಾನ್‌ ಮೊದಲಾದವರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

Also Read  ಭಾನುವಾರ ಲಾಕ್ ಡೌನ್ ಸದುಪಯೋಗ ➤ ಕಾಂಕ್ರೀಟ್ ಹಾಕಿ ಹೊಂಡ ಮುಚ್ಚಿದ ಬಿಜೆಪಿ ಕಾರ್ಯಕರ್ತರು

error: Content is protected !!
Scroll to Top