ನಟ ಪುನೀತ್ ಗೆ ಪದ್ಮಶ್ರೀ ಪ್ರಶಸ್ತಿ ನೀಡದಂತೆ ಸಚಿವ ಆರ್. ಅಶೋಕ್ ಒತ್ತಡ ➤ ಅಭಿಮಾನಿ ಸಂಘಗಳ ಒಕ್ಕೂಟ ಆರೋಪ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 22. ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡುವ ಬಗ್ಗೆ ರಾಜ್ಯ ಸರಕಾರವು ಶಿಫಾರಸ್ಸು ಮಾಡದಂತೆ ಕಂದಾಯ ಸಚಿವ ಆರ್. ಅಶೋಕ್ ತಡೆದಿದ್ದಾರೆ ಎಂದು ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟವು ಆರೋಪಿಸಿದೆ.


ಈ ಕುರಿತು ಮಂಗಳವಾರದಂದು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಒಕ್ಕೂಟದ ಕಾರ್ಯದರ್ಶಿ ಹೊನ್ನಯ್ಯಗೌಡ ಎಚ್, ಸಚಿವ ಆರ್. ಅಶೋಕ ಅವರ ಒತ್ತಡದಿಂದಾಗಿ ಮುಖ್ಯಮಂತ್ರಿಗಳು ನಟ ಪುನೀತ್ ರಾಜ್‍ಕುಮಾರ್ ಅವರ ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿಲ್ಲ ಎಂಬ ಸತ್ಯ ಹೊರಬಿದ್ದಿದೆ ಎಂದು ತಿಳಿಸಿದರು. ಈ ಹಿನ್ನೆಲೆ ಎ. 24ರ ರಾಜ್‍ಕುಮಾರ್ ಜಯಂತಿಯಂದು ಆರ್. ಅಶೋಕ್ ವಿರುದ್ಧ ನಗರದಲ್ಲಿ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ತಿಳಿಸಿದರು.

Also Read  ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಡಿ. ರೂಪಾ ನೇಮಕ

error: Content is protected !!
Scroll to Top