ರಾಜ್ಯ ವಿಧಾನ ಸಭಾ ಚುನಾವಣೆ ➤ ಮುಂದೆಕೂಡ ನಾನೇ ಮುಖ್ಯಮಂತ್ರಿ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com. ಮುಧೋಳ, ಮಾ. 22. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ. ಮುಂದಿನ ಬಾರಿಯೂ ನಾನೇ ಮುಖ್ಯಮಂತ್ರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ತಾಲೂಕು ಆಡಳಿತದ ನೂತನ ಕಟ್ಟಡ, ಮಂಟೂರು ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಸೇರಿ 13 ಕಾಮಗಾರಿಗಳ ಉದ್ಘಾಟನೆ ಹಾಗೂ 50 ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭಿವೃದ್ದಿ ಕಾರ್ಯ ನಡೆದಿದೆ. ಎಲ್ಲವನ್ನೂ ನಾನು ಕಣ್ಣಾರೆ ನೋಡಿದ್ದೇನೆ. ಆದರೆ ಮುರುಗೇಶ ನಿರಾಣಿ ಪ್ರತಿನಿಧಿಸುವ ಕ್ಷೇತ್ರದಲ್ಲಿನ ಪ್ರಗತಿಯನ್ನು ನೋಡಲು ಸಾಧ್ಯವಾಗಿಲ್ಲ. ಮುಂದಿನ ಬಾರಿ ನಾನೇ ಮುಖ್ಯಮಂತ್ರಿಯಾಗುತ್ತೇನೆ ಆ ಮೂಲಕ ನಿರಾಣಿ ಪ್ರತಿನಿಧಿಸುವ ಕ್ಷೇತ್ರಕ್ಕೆ ಭೇಟಿ ನೀಡಿ ಅಲ್ಲಿನ ಅಭಿವೃದ್ದಿಯನ್ನು ವೀಕ್ಷಿಸುತ್ತೇನೆ ಎಂದರು.

Also Read  ಜನರಿಗೆ ಹಣ ಪಡೆದು ಮತ ಹಾಕುವುದರಲ್ಲೇ ಆಸಕ್ತಿ!   ➤ ಹೈಕೋರ್ಟ್ ಕಿಡಿ..!

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ನಮ್ಮ ಪಕ್ಷ ಮುಂದಿನ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವುದು ನಿಶ್ಚಿತ ಎಂದವರು ತಿಳಿಸಿದರು.

error: Content is protected !!
Scroll to Top