ಇಂದು(ಮಾ.22) 8 ಕನ್ನಡಿಗರು ಸೇರಿ 106 ಪುರಸ್ಕೃತರಿಗೆ ಪದ್ಮಪ್ರಶಸ್ತಿ ಪ್ರಧಾನ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.22. 2023ನೇ ಸಾಲಿನಲ್ಲಿ ಪದ್ಮ ಪ್ರಶಸ್ತಿಗೆ ಭಾಜನರಾದ 106 ಮಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಸಾಹಿತಿ ಎಸ್‌.ಎಲ್‌.ಭೈರಪ್ಪ ಸೇರಿದಂತೆ ಹಲವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

2023ನೇ ಸಾಲಿನಲ್ಲಿ 6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ  ಅವರು ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದು, ಸಾಹಿತಿ ಭೈರಪ್ಪ ಹಾಗೂ ಸುಧಾಮೂರ್ತಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ತಿಳಿದುಬಂದಿದೆ.

Also Read  'ಮೋದಿ' ಅಂತ ಹೆಸರಿದ್ದವರೆಲ್ಲ ಕಳ್ಳರೇ.!      ➤ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೊಸ ವಿವಾದ.!                        

 

error: Content is protected !!
Scroll to Top