ಅಮಾಯಕರ ಹತ್ಯೆ ಮಾಡುವವರನ್ನು ಸಹಿಸಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ► ಬೆಳ್ತಂಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.07. ದೇವರು ಹೆಸರಿನಲ್ಲಿ, ಧರ್ಮದ ಹೆಸರಿನಲ್ಲಿ ಅಮಾಯಕ ಜನರನ್ನು ಹತ್ಯೆ ಮಾಡುವಂತಹ, ಹಿಂಸಾಚಾರ ನಡೆಸುವಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಅಂತಹವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಭಾನುವಾರದಂದು ಬೆಳ್ತಂಗಡಿಯಲ್ಲು
ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಅಧಿಕಾರದ ಆಸೆಯಿಂದ ಕೆಲವರು ಹೆಣವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ವಸಂತ ಬಂಗೇರ ಮಾತನಾಡಿದರು. ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್, ಐವನ್ ಡಿಸೋಜ, ಪ್ರತಾಪ್‌ಚಂದ್ರ ಶೆಟ್ಟಿ, ದಿವ್ಯಜೋತಿ, ಮುಗುಳಿ ನಾರಾಯಣ, ಎ.ಸಿ. ಭಂಡಾರಿ, ಬಿ.ಎಚ್.ಖಾದರ್, ಹರೀಶ್ ಕುಮಾರ್, ಧರಣೇಂದ್ರ ಕುಮಾರ್, ಶಾಹುಲ್ ಹಮೀದ್, ಮಮತಾ ಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Also Read  ಕಡಬ: ತಾಲೂಕಿನ ಗ್ರಾ.ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿ ಪ್ರಕ್ರಿಯೆ ಜ. 28ಕ್ಕೆ ನಿಗದಿ

error: Content is protected !!
Scroll to Top