ಕಾರು ಪಾರ್ಕಿಂಗ್ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ➤ ಯುವಕನ ಬರ್ಬರ ಹತ್ಯೆ…!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.22. ಮನೆ ಮುಂದೆ ನಿಲ್ಲಿಸಿದ್ದ ಕಾರು ಪಾರ್ಕಿಂಗ್ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ ನಡೆದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೇಡಿ ಮಲ್ಲಸಂದ್ರ ಗ್ರಾಮದಲ್ಲಿ ನಡೆದಿದೆ.


ಕೊಲೆಯಾದ ಯುವಕನ್ನು ಇಸ್ಮಾಯಿಲ್ ಖಾನ್ ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಬಂದಿದ್ದ ಇಸ್ಮಾಯಿಲ್ ಮನೆ ಮುಂದಿರುವ ಖಾಲಿ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಕಾರು ನಿಲ್ಲಿಸಿದಕ್ಕೆ ಎದುರು ಮನೆಯ ಸೈಯದ್ ಅಕಿಲ್ ಶಾ ಕುಟುಂಬಸ್ಥರು ಕ್ಯಾತೆ ತೆಗೆದಿದ್ದು, ಎರಡು ಕುಟುಂಬದವರ ನಡುವೆ ಮಾರಾಮಾರಿ ನಡೆದು ಇಸ್ಮಾಯಿಲ್‌ನನ್ನು ಡ್ರಾಗರ್ನಿಂದ ಇರಿದು ಹತ್ಯೆಗೈಯ್ಯಲಾಗಿದೆ.

Also Read  ಕೆಂಜಾಳ: ಕಾರು ಮರಕ್ಕೆ ಢಿಕ್ಕಿ ಹೊಡೆದ ಪ್ರಕರಣ ► ಗಾಯಾಳು ಓರ್ವ ಮೃತ್ಯು

error: Content is protected !!
Scroll to Top