ಆಟೋ ಮತ್ತು ಕಾರಿನ ನಡುವೆ ಸರಣಿ ಅಪಘಾತ..! ➤ ಕಾರು ಸಂಪೂರ್ಣ ನಜ್ಜುಗುಜ್ಜು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.22. ಕಾರೊಂದು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿರುವ ಘಟನೆ ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ನಡೆದಿದೆ.

ಕಾರು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಆಟೋ ಮತ್ತು ಕಾರೊಂದಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.

 

Scroll to Top