ಸೂಕ್ತ ದಾಖಲೆಗಳಿಲ್ಲದೆ 9 ಲಕ್ಷ ರೂ. ನಗದು ಕಾರಿನಲ್ಲಿ ಸಾಗಾಟ

(ನ್ಯೂಸ್ ಕಡಬ)newskadaba.com  ಬೆಳಗಾವಿ, ಮಾ.22. ಸೂಕ್ತ ದಾಖಲಾತಿಗಳಿಲ್ಲದೇ ಸಾಗಿಸಲಾಗುತ್ತಿದ್ದ 9 ಲಕ್ಷ ರೂಪಾಯಿ ನಗದು ಹಣವನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.

ಕಾರನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ನಗದು ಪತ್ತೆಯಾಗಿದೆ. ನಗದು ಹಣವು ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದೆ. ಆದರೆ ಈ ಹಣಕ್ಕೆ ಸಂಬಂಧಿಸಿದಂತೆ ಸಮರ್ಪಕ ದಾಖಲೆಗಳನ್ನು ಅವರು ಒದಗಿಸಿರುವುದಿಲ್ಲ. ಇದಲ್ಲದೇ ಹಣ ಸಾಗಾಣಿಕೆಗೆ ಸಂಬಂಧಿಸಿದಂತೆ ಇರುವ ನಿಗದಿತ ಎಸ್.ಓ.ಪಿ.ಯನ್ನು ಕೂಡ ಪಾಲಿಸದಿರುವುದು ಕಂಡುಬಂದಿದೆ.

Also Read  ಬಂಟ್ವಾಳ:  ವಿಚಾರಣಾಧೀನ ಕೈದಿಯಿಂದ ಗಾಂಜಾ ವಶ          

 

error: Content is protected !!
Scroll to Top