ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ ಬೆಂಗಳೂರು ಮೆಟ್ರೋದಲ್ಲಿ ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – News Kadaba

➤ ಬೆಂಗಳೂರು ಮೆಟ್ರೋದಲ್ಲಿ ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮಾ 22. ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 236 ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಆನ್​​​ಲೈನ್ ​(Online) ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 24, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​ bmrc.co.inಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಹುದ್ದೆಯ ಮಾಹಿತಿ:

ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್- 108

ಸೆಕ್ಷನ್ ಎಂಜಿನಿಯರ್- 14

ಮೇಂಟೈನರ್- 114

 

ವೇತನ:

ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್- ಮಾಸಿಕ ₹ 35,000- 82,660

ಸೆಕ್ಷನ್ ಎಂಜಿನಿಯರ್- ಮಾಸಿಕ ₹ 40,000- 94,500

ಮೇಂಟೈನರ್- ಮಾಸಿಕ ₹ 25,000-59,060

 

ವಿದ್ಯಾರ್ಹತೆ:

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಐಟಿಐ, ಡಿಪ್ಲೊಮಾ, ಬಿಇ/ ಬಿ.ಟೆಕ್, ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.

 

ವಯೋಮಿತಿ:

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 22, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 3 ವರ್ಷ

SC/ST ಅಭ್ಯರ್ಥಿಗಳು- 5 ವರ್ಷ

 

ಅರ್ಜಿ ಶುಲ್ಕ:

ಸಾಮಾನ್ಯ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 1180 + 18% GST

SC/ ST ಅಭ್ಯರ್ಥಿಗಳು- 590 + 18% GST

 

 

ಉದ್ಯೋಗದ ಸ್ಥಳ:

ಬೆಂಗಳೂರು

 

 

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಮೆರಿಟ್ ಲಿಸ್ಟ್

ಸಂದರ್ಶನ

ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/03/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 24, 2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಏಪ್ರಿಲ್ 27, 2023

ಲಿಖಿತ ಪರೀಕ್ಷೆ ನಡೆಯುವ ದಿನ: ಜೂನ್​ 6th, 7th & 8th 2023

Scroll to Top