ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ➤ ಸಿಎಂ ಬೊಮ್ಮಾಯಿ ಘೋಷಣೆ..!

(ನ್ಯೂಸ್ ಕಡಬ)newskadaba.com ಬಾಗಲಕೋಟೆ, ಮಾ.22. ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಪಿಯುಸಿ, ಪದವಿ ವಿದ್ಯಾರ್ಥಿಗ’ಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.


ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈ ಬಾರಿ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ .


4 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುತ್ತೇವೆ ಎಂದು ಹೇಳಿದರು. ಸರ್ಕಾರಿ ಪಿಯು, ಡಿಗ್ರಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಇನ್ನು ಮುಂದೆ ಶುಲ್ಕವಿಲ್ಲದೇ ಪ್ರವೇಶ ಪಡೆಯಬಹುದು ಎಂದು ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಿಸಿದ್ದರು.

Also Read  ಪ್ರೀತಿ ವಿಚಾರಕ್ಕೆ ಜಗಳ- ಚೂರಿ ಇರಿತ

 

error: Content is protected !!
Scroll to Top