ದೇಶದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ ➤ ಇಂದು ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

(ನ್ಯೂಸ್ ಕಡಬ)Newskadaba.com ನವದೆಹಲಿ, ಮಾ .22 ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕ ಆರೋಗ್ಯ ಸಿದ್ದತೆ ಹಾಗೂ ಪರಿಸ್ಥಿತಿ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಜೆ 4:30ಕ್ಕೆ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.

ದೇಶದಲ್ಲಿ ಒಂದೇ ದಿನ 1,134 ಕೋವಿಡ್ ಪ್ರಕರಣ ಕಂಡು ಬಂದಿದ್ದು, ಈವರೆಗಿನ ಸೋಂಕಿತರ ಸಂಖ್ಯೆ 4,46,98,118ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 5,30,813 ಆಗಿದೆ.ಕಳೆದ ಕೆಲ ದಿನಗಳಿಂದ ಕೋವಿಡ್ ಪ್ರಕರಣ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಈ ಪರಿಸ್ಥಿತಿ ಪರಿಶೀಲಿಸಲು ಪ್ರಧಾನಿಯವರು ಇಂದು ಸಭೆ ಕರೆದಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಶೀಘ್ರವೇ ಎಪಿಎಲ್-ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ..!

 

 

 

error: Content is protected !!
Scroll to Top