ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

(ನ್ಯೂಸ್ ಕಡಬ)newskadaba.com ಚನ್ನರಾಯಪಟ್ಟಣ, ಮಾ.23. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ(73) ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ವಾಮೀಜಿಯವರು ಕಳೆದ 4 ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿದ್ದು ಶ್ರವಣಬೆಳಗೊಳದ ಮಠದಲ್ಲಿಯೇ ಅವರಿಗೆ ಶುಶ್ರೂಷೆ ಮಾಡಲಾಗುತ್ತಿತ್ತು ಎನ್ನಲಾಗಿತ್ತು.

ಬಿಪಿ, ಶುಗರ್ ಏರುಪೇರಿನಿಂದ ಅಸ್ವಸ್ಥಗೊಂಡು ಸ್ವಾಮೀಜಿ ಕೆಳಗೆ ಬಿದ್ದಿದ್ದು ತಕ್ಷಣ ಅವರನ್ನು ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಅಂಬುಲೆನ್ಸ್‌ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Also Read  ಗಾಂಜಾ ಮತ್ತಿನಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಯುವಕರ ತಂಡ ➤ ಮಾಡಿದ್ದೇನು ಗೊತ್ತೇ..?!!

 

error: Content is protected !!
Scroll to Top