78,800 ಕೋಟಿ ರೂ.ಗಳ ಬಜೆಟ್‌ ಮಂಡಿಸಿದ ದೆಹಲಿ ಸರ್ಕಾರ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.23. ದೆಹಲಿ ಸರ್ಕಾರವು ದೆಹಲಿ ವಿಧಾನಸಭೆಯಲ್ಲಿಂದು 78,800 ಕೋಟಿ ರೂ.ಗಳ ಬಜೆಟ್‌ ಮಂಡಿಸಿದೆ ಎಂದು ತಿಳಿದುಬಂದಿದೆ.


ಹಣಕಾಸು ಸಚಿವ ಕೈಲಾಶ್ ಗೆಹ್ಲೋತ್‌ ಅವರು 2023-24ನೇ ಸಾಲಿನ ಬಜೆಟ್ ಮಂಡಿಸಿದರು. ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡಲಾಗಿದೆ. ಮೂಲಸೌಕರ್ಯಕ್ಕೆ 22,000, ಶಿಕ್ಷಣಕ್ಕೆ 16 ಸಾವಿರ ಕೋಟಿ, ಆರೋಗ್ಯಕ್ಕೆ 9 ಸಾವಿರ ಕೋಟಿ, ಜಾಹೀರಾತುಗಳಿಗೆ 550 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ ಎಂದು ಗೆಹ್ಲೋತ್ ಅವರು ತಿಳಿಸಿದ್ದಾರೆ.

Also Read  ಶೌಚಾಲಯಗಳಲ್ಲಿ ಮೊಬೈಲ್ ಇಟ್ಟು ಶೂಟಿಂಗ್ ➤ ಮೂವರು ಮುಸ್ಲಿಂ ವಿದ್ಯಾರ್ಥಿನಿರ ಅಮಾನತು

error: Content is protected !!
Scroll to Top