ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಹಾಸನ, ಮಾ. 23. ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (73) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಅನಾರೋಗ್ಯದ ಹಿನ್ನೆಲೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರನ್ನು ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಿಧನರಾಗಿದ್ದಾರೆ.

Scroll to Top