ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ➤ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 23. ಪ್ರಧಾನಿ ನರೇಂದ್ರ ಮೋದಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಸೂರತ್ ಕೋರ್ಟ್ ಆದೇಶ ಹೊರಡಿಸಿದೆ.

2019 ರಲ್ಲಿ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಕುರಿತು ಗುಜರಾತ್ ನ ಸೂರತ್ ಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಇಂದು ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.

Also Read  ವಿಟ್ಲ: ಮದುಮಗನಿಂದ ಕೊರಗಜ್ಜನ ವೇಷ ಧರಿಸಿ ಅವಹೇಳನ ಪ್ರಕರಣ ➤ ಆರೋಪಿಯ ಪರ ನಿಂತ ಬಿಜೆಪಿ ಯುವ ಮುಖಂಡ ಪಕ್ಷದಿಂದ ಸಸ್ಪೆಂಡ್

error: Content is protected !!
Scroll to Top