ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ➤ 30 ದಿನಗಳ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 23. ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋರ್ಟ್ ಶಿಕ್ಷೆ ವಿಧಿಸಿದ ಬೆನ್ನಲ್ಲೇ, ಸೂರತ್‌ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

2019ರ ಲೋಕಸಭಾ ಚುನಾವಣೆಯ ಸಂದರ್ಭ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ, ಸೂರತ್‌ ಕೋರ್ಟ್‌ ಗುರುವಾರದಂದು ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ರಾಹುಲ್‌ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು, ಇದೀಗ ಕೋರ್ಟ್‌ 30 ದಿನಗಳ ಜಾಮೀನು ಮಂಜೂರು ಮಾಡಿದ್ದು ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ರಾಹುಲ್ ಗಾಂಧಿಯವರ ವಿವಾದಾತ್ಮಕ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್‌ ಮಾನಹಾನಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್‌ ಕೋರ್ಟ್‌ ರಾಹುಲ್‌ ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣ ಪ್ರಕಟಿಸಿತ್ತು. ಈ ತೀರ್ಪು ಪ್ರಕಟವಾಗುವ ಮೊದಲೇ ರಾಹುಲ್‌ ಗಾಂಧಿ ಕೋರ್ಟ್‌ಗೆ ಹಾಜರಾಗಿದ್ದರು.

error: Content is protected !!

Join the Group

Join WhatsApp Group