ಮಂಗಳೂರು: 23 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 23. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಅಜರುದ್ದೀನ್ ಅಲಿಯಾಸ್ ಅಜರ್ (ನಾಥು) ಕೃಷ್ಣಾಪುರ ಎಂದು ಗುರುತಿಸಲಾಗಿದೆ. ಈತನ ವಿರುದ್ದ ದಾಖಲಾಗಿದ್ದ 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್ ಇದ್ದು, ಮಂಗಳೂರು ಪೊಲೀಸು ಆಯುಕ್ತರ ಆದೇಶದ ಮೇರೆಗೆ ಬಂಧಿಸಲಾಗಿದೆ. ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್‌ ಕುಮಾರ್‌, ನಿರ್ದೇಶನದಂತೆ ಸುರತ್ಕಲ್ ಠಾಣಾ ನಿರೀಕ್ಷಕರಾದ ಮಹೇಶ್‌ ಪ್ರಸಾದ್‌ ನೇತೃತ್ವದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಮಲ್ಲಿಕಾರ್ಜುನ್‌ ಸಿಬ್ಬಂದಿಗಳಾದ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ಅವರ ತಂಡವು ಆರೋಪಿಯನ್ನು ಬಂಧಿಸಿ, ಮಂಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Also Read  ಉಡುಪಿ :ಸಾಲಬಾಧೆಯಿಂದ ವ್ಯಕ್ತಿ ಆತ್ಮಹತ್ಯೆಗೆ ಶರಣು

error: Content is protected !!
Scroll to Top