(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.23. ಆರೋಪಿಯನ್ನೇ ಅಪಹರಿಸಿದ ಪೊಲೀಸರು ಆತನ ಸಂಬಂಧಿಕರ ಬಳಿ 40 ಲಕ್ಷ ರೂ.ಗೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪಿಎಸ್ಐ ರಂಗೇಶ್ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಎಫ್ಐಆರ್ ದಾಖಲಾದ ವಿಚಾರ ತಿಳಿಯುತ್ತಿದ್ದಂತೆಯೇ ಆರೋಪಿ ಪೊಲೀಸರು ತಲೆಮರೆಸಿಕೊಂಡಿದ್ದಾರೆ. ಕೆಲವು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.









