ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ➤ ನೌಕರರ ಮುಷ್ಕರಕ್ಕೆ ಕರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 23. ಸರ್ಕಾರಿ ನೌಕರರ ವೇತನಕ್ಕೆ ಸರಿಸಮಾನವಾಗಿ ವೇತನ ಏರಿಕೆ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ನಾಳೆಯಿಂದ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.


ಈ ಹಿಂದೆ ಮಾರ್ಚ್ 21ರಂದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಳೆ 15% ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದ ಹಿನ್ನೆಲೆ ಮುಷ್ಕರವನ್ನು ಹಿಂಪಡೆದಿದ್ದರು. ಆದರೆ ಸಮಾನ ಮನಸ್ಕರರ ವೇದಿಕೆ, ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ಕೊಟಿದ್ದು, ಸರ್ಕಾರಿ ನೌಕರರಿಗೆ ಸಮಾನವಾಗಿ ವೇತನ ಹೆಚ್ಚಳ ಮಾಡಬೇಕು ಎಂದು ಬೇಡಿಕೆ ಇಟ್ಟಿದೆ.

Also Read  ಅರಂತೋಡು: ಕಾಲೇಜು ವಿದ್ಯಾರ್ಥಿ ಸಂಸತ್ತಿನ ಚುನಾವಣೆ ➤ ನಾಯಕನಾಗಿ ಪುನೀತ್ ಕೆ.ಎಸ್, ಮೂವಿತ ಬಿ.ವಿ ಉಪನಾಯಕಿಯಾಗಿ ಆಯ್ಕೆ

error: Content is protected !!
Scroll to Top