ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಮೃತ್ಯು..!

(ನ್ಯೂಸ್ ಕಡಬ)newskadaba.com ಮ‌ಡಿಕೇರಿ, ಮಾ.23. ಉಂಗುರ ನುಂಗಿ 8 ತಿಂಗಳ ಮಗು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.

ಮುನೀರ್ ಎಂಬವರ ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿದ್ದು, ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಗುವನ್ನು ದಾಖಲಿಸಿದರೂ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಗಿದೆ. ಆದರೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

Scroll to Top