ಉಳ್ಳಾಲ: ಮಾ. 25ರಂದು ಹೊನಲು‌ ಬೆಳಕಿನ ನರಿಂಗಾನ‌ ಕಂಬಳ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.23. ಇದೇ ಮೊದಲ ಬಾರಿಗೆ ಸರಕಾರಿ ಕಂಬಳ ಆಯೋಜನೆ ಮಾಡಲಾಗಿದ್ದು, ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ಲವಕುಶ ಜೋಡುಕರೆ ಹೆಸರಿನಲ್ಲಿ ಹೊನಲು ಬೆಳಕಿನ ನರಿಂಗಾನ ಕಂಬಳ ಮಾ. 25ರಂದು ನಡೆಯಲಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ.


ಕಂಬಳ ಕರೆಯ ಬಳಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 25ರಂದು ಬೆಳಗ್ಗೆ 10.30ಕ್ಕೆ ಶ್ರೀ ಕ್ಷೇತ್ರ ಶಾಂತಿಪಳಿಕೆಯ ಪ್ರಧಾನ ಪ್ರಧಾನ ತಂತ್ರಿಗಳಾದ ವರ್ಕಾಡಿ ರಾಜೇಶ್ ತಾಳಿತ್ತಾಯರವರು ಉದ್ಘಾಟಿಸಲಿದ್ದಾರೆ. ಕರೆಯನ್ನು ಶ್ರೀ ಕ್ಷೇತ್ರ ಕಣಂತೂರಿನ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆಯಾನೆ ಮಂಜು ಭಂಡಾರಿ ಅವರು ಉದ್ಘಾಟಿಸಲಿದ್ದಾರೆ. ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೈಲಜಾ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಧಾರ್ಮಿಕ ಮುಖಂಡರುಗಳಾದ ಗುಣಕರ ಆಳ್ವ ಯಾನೆ ರಾಮ ರೈ ಬೋಳಿಯಾರ್, ಮಂಗಿಲ್ ಮಾರ್ ಶ್ರೀ ಅಣ್ಣಪ್ಪ ಸ್ವಾಮಿ ಹಾಗೂ ಪರಿವಾರದ ದೈವಗಳ ದೈವಸ್ಥಾನದ ಆಡಳಿತ ಮೊಕ್ತೇಸರ ಬಡಾಜೆ ರವಿಶಂಕರ್ ಶೆಟ್ಟಿ , ಶ್ರೀ ಕ್ಷೇತ್ರ ತಲಪಾಡಿಯ ಪ್ರಧಾನ ಅರ್ಚಕ ಗಣೇಶ್ ಭಟ್ ಪಂಜಾಲ, ದೇವಂದಪಡ್ಪು ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಆಚಾರ್ಯ, ಶ್ರೀ ಕ್ಷೇತ್ರ ಶಾಂತಿಪಳಿಕೆಯ ಆಡಳಿತ ಮೊಕ್ತೇಸರ ಪ್ರಸನ್ನ ಪಕ್ಕಳ ಬಲೆತ್ತೋಡು, ಕಂಬಳ ಸಮಿತಿಯ ಜಿಲ್ಲಾಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ, ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅಬ್ದುಲ್ ಅಜೀಝ್ ಯಾನೆ ಮೈಸೂರು ಬಾಬಾ, ಎಸಿಪಿ ಧನ್ಯಾ ನಾಯಕ್, ಪಣಂಬೂರು ಇಡ್ಯ ಶ್ರೀ ಧೂಮಾವತಿ ದೇವಸ್ಥಾನದ ಗಡಿ ಪ್ರಧಾನ ಪ್ರಭಾಕರ್ ರೈ ಯಾನೆ ಅಣ್ಣಪ್ಪ ಅರುವಾಲ್, ಸ್ಥಳೀಯ ಸಂತ ಲಾರೆನ್ಸರ ದೇವಾಲಯದ ಧರ್ಮ ಗುರು ಫಾ.‌ ಪೆಡ್ರಿಕ್ ಕೊರೆಯಾ, ನೆತ್ತಿಲ ಬಾಳಿಕೆ ಗಡಿಪ್ರದಾನ ಮೋಹನ್ ದಾಸ್ ಭಂಡಾರಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

Also Read  'ಜಯತು ಜನ್ಮಭೂಮಿ' ದೇಶಭಕ್ತಿ ಗೀತೆ ಬಿಡುಗಡೆ

 

error: Content is protected !!
Scroll to Top