➤ಮಂಗಳೂರು ಹಲವು ಪ್ರಖರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಬಂಧನ

(ನ್ಯೂಸ್ ಕಡಬ) newskadaba.com. ಮುಂಬೈ,  ಮಾ. 23. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೋಸ್ಟ್ ವಾಟೆಂಡ್ ಆರೋಪಿ ಅಜರುದ್ದೀನ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ಅಜರುದ್ದೀನ್ ಅಲಿಯಾಸ್ ಅಜರ್ (29) ಎಂದು ಗುರುತಿಸಲಾಗಿದೆ.ಈತನ ಮೇಲೆ ಮಂಗಳೂರು ನಗರ, ದಕ್ಷಿಣಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ  ವಾರಂಟ್ ಇದೆ.ಮಂಗಳೂರು ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್ ಕುಮಾರ್ ರವರ ನಿರ್ದೇಶನದಂತೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Also Read  ಕುಟ್ರುಪ್ಪಾಡಿ: ವಾಳ್ಯ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

*

error: Content is protected !!
Scroll to Top