ಸಾರಿಗೆ ನೌಕರರ ಮುಷ್ಕರಕ್ಕೆ ಕೋರ್ಟ್ ತಡೆ ➤ 3 ವಾರ ಮುಷ್ಕರ ಮಾಡದಂತೆ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 23. ಸರ್ಕಾರಿ ನೌಕರರ ಸಮಾನ ವೇತನಕ್ಕಾಗಿ ಆಗ್ರಹಿಸಿ ಸಾರಿಗೆ ನೌಕರರು ಮಾ. 24 ರಿಂದ ಮುಷ್ಕರಕ್ಕೆ ಕರೆ ನೀಡಿದ ಬೆನ್ನಲ್ಲೇ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, 3 ವಾರಗಳ ಕಾಲ ಮುಷ್ಕರ ನಡೆಸದಂತೆ ಆದೇಶ ಹೊರಡಿಸಿದೆ.

ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆ ಸಾರಿಗೆ ಸಂಚಾರ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು, ಇದೀಗ ಹೈಕೋರ್ಟ್ ಮುಷ್ಕರಕ್ಕೆ ಬ್ರೇಕ್ ಹಾಕಿದೆ. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ಸಿ.ಜೆ ಪ್ರಸನ್ನ, ಬಿ ವರಾಳೆ ಅವರಿದ್ದ ಪೀಠವು ಆದೇಶ ಹೊರಡಿಸಿದೆ.

Also Read  ಮಗುವಿಗೆ "ಸಿದ್ದರಾಮಯ್ಯ'' ಎಂದು ನಾಮಕರಣ ಮಾಡಿದ ಮಾಜಿ ಸಿಎಂ ಅಭಿಮಾನಿ

 

 

error: Content is protected !!
Scroll to Top