ಹಿಂದುತ್ವದ ವಿರುದ್ದ ಅವಹೇಳನಕಾರಿ ಪೋಸ್ಟ್ ➤ ನಟ ಚೇತನ್ ಗೆ ಜಾಮೀನು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 23. ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿ ಬಂಧನಕ್ಕೊಳಗಾಗಿದ್ದ ನಟ ಚೇತನ್ ಗೆ ಇದೀಗ 32 ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ನೀಡಿದೆ.

ಈ ಕುರಿತು ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಜೆ.ಲತಾ ಅವರು ಆದೇಶ ಹೊರಡಿಸಿದ್ದು, ಇದರ ಪ್ರಕಾರ 25 ಸಾವಿರ ರೂ. ವೈಯಕ್ತಿಕ ಬಾಂಡ್ ಮತ್ತು ಒಬ್ಬರ ಭದ್ರತೆ ನೀಡಲು ಸೂಚಿಸಲಾಗಿದೆ. ಬೆಂಗಳೂರಿನ ಶಿವಕುಮಾರ್ ಎಂಬವರು ನೀಡಿದ್ದ ದೂರಿನಂತೆ ನಟ ಚೇತನ್ ರನ್ನು ಬಂಧಿಸಿದ ಶೇಷಾದ್ರಿಪುರಂ ಠಾಣಾ ಪೊಲೀಸರು ಐಪಿಸಿ 295A, 505B ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

Also Read  ಕ್ರೀಡಾ ತರಬೇತಿ ಕೇಂದ್ರ – ಅರ್ಜಿ ಆಹ್ವಾನ

error: Content is protected !!
Scroll to Top