ಉಪ್ಪಿನಂಗಡಿ: ರಸ್ತೆ ಅಪಘಾತ  ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ. 24. ಅಶೋಕ್ ಲೈಲ್ಯಾಂಡ್ ದೋಸ್ತ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ- 75ರ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ರಿಕ್ಷಾ ಚಾಲಕ ಮಹಮ್ಮದ್ ಅನ್ಸಾರ್, ಸುಮಯ್ಯ ಹಾಗೂ 1 ವರ್ಷದ ಮಗು ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಅಶೋಕ್ ಲೇಲ್ಯಾಂಡ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದೆ.

 

error: Content is protected !!
Scroll to Top