ಅರಂತೋಡು:ನಾಳೆ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಮೃತ ಉದ್ಯಾನವನ ➤ಅಮೃತ ಮುಕ್ತಿಧಾಮ ಹಾಗೂ ಅಮೃತ ಸಭಾಂಗಣ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) News kadaba.com ಅರಂತೋಡು, ಮಾ.24 ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಿಸಿದ ಅಮೃತ ಸಭಾಂಗಣ ,ಅಮೃತ ಮುಕ್ತಿಧಾಮ ಹಾಗೂ ಅಮೃತ ಉದ್ಯಾನವನ ಉದ್ಘಾಟನಾ ಕಾರ್ಯಕ್ರಮ ಮಾ.25 ರಂದು (ನಾಳೆ) ನಡೆಯಲಿದೆ.ನೂತನ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಬಂದರು ಮೀನುಗಾರಿಕೆ ಮತ್ತು ಒಳನಾಡುಜಲ ಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದಾರೆ.ಅಧ್ಯಕ್ಷತೆಯನ್ನು  ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ದೇರಾಜೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ  ಎ.ವಿ.ತೀರ್ಥರಾಮ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ್,ಸುಳ್ಯ ತಾಲ್ಲೂಕು ಪಂಚಾಯತ್ ಅಧಿಕಾರಿ ಭವಾನಿ ಶಂಕರ ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ,ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಉಪ ವಿಭಾಗ  ಅಭಿಯಂತರಾದ ಹೆಚ್.ಹನುಮಂತರಾಯಪ್ಪ,ಸುಳ್ಯ ತಾಲ್ಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ,ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ಕೋಡಂಕೇರಿ , ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರು ವಿಶ್ರಾಂತ ಪ್ರಾಂಶುಪಾಲ ಕೆ.ಆರ್.ಗಂಗಾಧರ, ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ  ಸಂತೋಷ್ ಕುತ್ತಮೊಟ್ಟೆ  ,ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಅಧ್ಯಕ್ಷ ಟಿ.ಎಮ್.ಶಹೀದ್ ತೆಕ್ಕಿಲ್ ,ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಅಧ್ಯಕ್ಷ ಯು.ಎಮ್.ಕಿಶೋರ್ ಕುಮಾರ್, ಅರಂತೋಡು ಶ್ರೀ ಮಲ್ಲಿಕಾರ್ಜುನ ಭಜನಾ ಮಂಡಳಿ ಅಧ್ಯಕ್ಷ ಕೆ.ಆರ್.ಪದ್ಮನಾಭ, ಸಂಪಾಜೆ ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಲಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ, ಅರಂತೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ವೇತಾ ಆರಮನೆಗಾಯ ,ಅರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಗುಂಡಿ ಭಾಗವಹಿಸಲಿದ್ದಾರೆ.

Also Read  ಹಿರಿಯ ಸಾಹಿತಿ ಗೀತಾ ನಾಗಭೂಷಣ್ ಇನ್ನಿಲ್ಲ

 

*ನಾಳೆ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಮೃತ ಉದ್ಯಾನವನ*

*➤  ಅಮೃತ ಮುಕ್ತಿಧಾಮ ಹಾಗೂ ಅಮೃತ ಸಭಾಂಗಣ ಉದ್ಘಾಟನಾ ಕಾರ್ಯಕ್ರಮ*

error: Content is protected !!
Scroll to Top