ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 24. ಸುಮಾರು 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.

ಬಂಧಿತ ಆರೋಪಿಯನ್ನು ತುಂಬೆ ವ್ಯಾಪ್ತಿಯ ತಲಪಾಡಿ ನಿವಾಸಿ ಅಬ್ದುಲ್ ಅಜೀಜ್ (45) ಎಂದು ಗುರುತಿಸಲಾಗಿದೆ. ಈತ ಕೇರಳ ಮತ್ತು ಕರ್ನಾಟಕದ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಅಜೀಜ್ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಲ್ಕು, ಉಳ್ಳಾಲದಲ್ಲಿ ಮೂರು, ಬಂಟ್ವಾಳದಲ್ಲಿ ಒಂದು ಮತ್ತು ಹಾಸನದ ಅರೇಹಳ್ಳಿ ಮತ್ತು ಕೇರಳ ರಾಜ್ಯದ ಕುಟ್ಯಾಡಿಯಲ್ಲಿ ತಲಾ ಒಂದು ಪ್ರಕರಣಗಳಿವೆ.
ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

Also Read  ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೋರು ಮಾಡಲು ಅರ್ಜಿ ಆಹ್ವಾನ

error: Content is protected !!
Scroll to Top