ಸುಬ್ರಹ್ಮಣ್ಯ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ. 24. ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯದ ಕಾಶಿ ಕಟ್ಟೆಯ ಸಮೀಪ ನಡೆದಿದೆ.

 


ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಕ್ಕಡದ ನಿವಾಸಿ ಸುಜಿತ್ ಎಂದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ಸುಬ್ರಹ್ಮಣ್ಯದಲ್ಲಿ ಲಾಂಡ್ರಿ ಕೆಲಸ ನಡೆಸುತ್ತಿದ್ದ ಈತ, ಪರ್ವತಮುಖಿ ಬಳಿ ಇರುವ ತಮ್ಮ ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕಳೆದ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

error: Content is protected !!
Scroll to Top