ಕೋರ್ಟ್ ಆವರಣದಲ್ಲೇ ಪತ್ನಿ ಮುಖಕ್ಕೆ ಆ್ಯಸಿಡ್ ಎರಚಿದ ಭೂಪ

(ನ್ಯೂಸ್ ಕಡಬ) newskadaba.com ತಮಿಳುನಾಡು, ಮಾ. 24. ಕೋರ್ಟ್ ಆವರಣದಲ್ಲೇ ಪತ್ನಿಯ ಮುಖದ ಮೇಲೆ ಪತಿಯೊಬ್ಬ ಆ್ಯಸಿಡ್ ಎಸೆದಿರುವ ಘಟನೆ ತಮಿಳುನಾಡಿನ ಕೊಯಮತ್ತೂರುನಲ್ಲಿ ನಡೆದಿದೆ.

ಇಲ್ಲಿನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಆ್ಯಸಿಡ್ ಎರಚಿದ್ದು, ಆಕೆ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ. ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಕವಿತಾ ಇಂದು ನ್ಯಾಯಾಲಯಕ್ಕೆ ಆಗಮಿಸಿದ್ದ ವೇಳೆ ಪತಿ ಶಿವಕುಮಾರ್ ಆಸಿಡ್ ಎರಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

 

Scroll to Top